
ಧಾರವಾಡ (ಕರ್ನಾಟಕ ವಾರ್ತೆ) ಜು.14: ಧಾರವಾಡ ಜಿಲ್ಲೆಯಲ್ಲಿನ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಖಾಲಿಯಿರುವ ಹುದ್ದೆಗಳಿಗೆ ಜುಲೈ 23, 2025 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಮ್ಬಿಬಿಎಸ್ ವೈಧ್ಯಕೀಯ ಅಧಿಕಾರಿ 14 ಹುದ್ದೆಗಳು. ಪ್ರಯೋಗಾಲಯ ತಾಂತ್ರಿಕ 4 ಹುದ್ದೆ. ಸ್ಟಾಫ್ ನರ್ಸ್ 1. ಆರೋಗ್ಯ ನಿರೀಕ್ಷಕ ಅಧಿಕಾರಿ 2 ಹೀಗೆ ಒಟ್ಟು 21 ಹುದ್ದೆಗಳಿಗೆ ಸಂದರ್ಶನ ಜರುಗಿಸಲಾಗುತ್ತದೆ.

ಸದರಿ ನೇಮಕಾತಿಗೆ ಸಂಬಂಧಿಸಿದ ವಿವರಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾಫಲಕದಲ್ಲಿ ರೋಸ್ಟರ್ ಮತ್ತು ವಿದ್ಯಾರ್ಹತೆಯ ಮಾಹಿತಿಯನ್ನು ಪ್ರಕಟಿಸಲಾಗಿದ್ದು, ನಮ್ಮ ಕ್ಲಿನಿಕ್ಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ, ಹುದ್ದೆಗಳಿಗೆ ಸಂಬಂಧಿಸಿದ ವಿವರಗಳಿಗಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಎನ್.ಹೆಚ್.ಎಮ್ ವಿಭಾಗದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಪ್ರಕಟಣೆ ತಿಳಿಸಿದೆ.