
ಧಾರವಾಡ ಜು.28: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಗಸ್ಟ್ 9, 2025 ರಂದು ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16,2025 ರಂದು ಭಗವಾನ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸುವ ಹಿನ್ನಲೆಯಲ್ಲಿ ಜಯಂತಿಗಳ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜುಲೈ 30, 2025 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.