
ಜು.30 ರಂದು ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜನೆ ಧಾರವಾಡ ಜು.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಜುಲೈ 30, 2025 ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್.ದೊಡ್ಡಮನಿ, ಹುಬ್ಬಳ್ಳಿ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಮ್. ಹೊನಕೇರಿ, ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಅವರು ಭಾಗವಹಿಸುವರು. ಅಂತರಾಷ್ಟ್ರೀಯ ನ್ಯಾಯ ಮಿಷನ್ದ ರಾಜ್ಯ ಉನ್ನತ ಅಧಿಕಾರ ಸಮಿತಿ ಸದಸ್ಯ ವಿನೋದ ಕುಮಾರ ಪಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್.ಕುಕನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





