
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್ಆರ್) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಹೀಗೆ ಒಟ್ಟು ನಾಲ್ಕು ಗಂಟೆಗಳಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇನ್ನು ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲು 13 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಆಗಸ್ಟ್ 10) ಬೆಂಗಳೂರು (Bengaluru) ಪ್ರವಾಸದಲ್ಲಿದ್ದು, ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದು, ವೇದಿಕೆ ಮೇಲೆ ಮೋದಿ ಜೊತೆ 13 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮೊದಲು 10 ಜನರಿಗೆ ಮಾತ್ರ ಇತ್ತು. ಆದ್ರ, ಇದೀಗ ಮತ್ತೆ ಮೂವರಿಗೆ ಅವಕಾಶ ನೀಡಲಾಗಿದೆ.
ವೇದಿಕೆಯಲ್ಲಿ 13 ಮಂದಿಗೆ ಅವಕಾಶ
ವಂದೇ ಭಾರತ್ ಹಾಗೂ ಹಳದಿ ಮಾರ್ಗ ಮೆಟ್ರೋಗೆ ಚಾಲನೆ ಕೊಟ್ಟ ಬಳಿಕ ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಈ ವೇಳೆ ಮೊದಿ ಜೊತೆ ವೇದಿಕೆ ಹಂಚಿಕೊಳ್ಳಲು 13 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಮನೋಹರ್ ಲಾಲ್, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ತೇಜಸ್ವಿ ಸೂರ್ಯ, ಸಂಸದ ಸಿ.ಎನ್. ಮಂಜುನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ನಿನ್ನೆಯವರೆಗೂ ಕೇವಲ 10 ಜನರಿಗೆ ಅವಕಾಶ ಎಂದು ಪಟ್ಟಿ ರೆಡಿ ಮಾಡಲಾಗಿತ್ತು. ಆದ್ರೆ, ಇದೀಗ ಕೊಂಚ ಬದಲಾವಣೆ ಮಾಡಲಾಗಿದ್ದು, ಹೆಚ್ಚುವರಿಯಾಗಿ ಆರ್ ಅಶೋಕ್, ಬೈರತಿ ಸುರೇಶ್ ಹಾಗೂ ಸಂಸದ ಡಾ ಸಿಎನ್ ಮಂಜುನಾಥ್ ಅವರಿಗೆ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಇನ್ನು ಈ ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್ನಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.





