
ನಿನ್ನೆ ಇದೇ ಜಾಗದಲ್ಲಿ ಚಿಗರಿ ಬಸ್ ಡಿಕ್ಕಿ ಘಟನೆ ನಡೆದಿದ್ದರೂ, ಇಂದು ಮತ್ತೊಮ್ಮೆ ದುರಂತ ಮರುಕಳಿಸಿದೆ.ಮುಂದೆ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಇನ್ನೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ.ಡಿಕ್ಕಿ ಹೊಡೆದ ಕಾರಿನ ಚಾಲಕ ಘಟನೆಯ ಬಳಿಕ ಸ್ಥಳದಿಂದ ಪರಾರಿಯಾದರೆ, ಹಾನಿಗೊಳಗಾದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಯಿತು.
ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾದ ಕಾರು ಹಾಗೂ ಚಾಲಕನ ಪತ್ತೆಗೆ ಪ್ರಯತ್ನ ಆರಂಭಿಸಿದ್ದಾರೆ.
ಧಾರವಾಡ — ಟ್ರಾಫಿಕ್ ನಿಯಮ ಉಲ್ಲಂಘನೆ ಹಾಗೂ ಅಜಾಗರೂಕ ಚಾಲನೆಗಳಿಂದ ಇದೇ ಸ್ಥಳದಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿರುವುದರಿಂದ, ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.






