[ad_1]
ಬೆಳಗಾವಿ: ಚಿಕ್ಕೋಡಿಯ ಕಾನೂನು ಪದವಿ ಕಾಲೇಜ್ ನಲ್ಲಿ ಓದುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ.

ಮೃತ ಯುವಕ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಂಬಗಿ ಗ್ರಾಮದ ನಿವಾಸಿ ಶಶಾಂಕ ಬಟಕೋಳಿ (19) ಎಂದು ತಿಳಿದು ಬಂದಿದೆ. ಚಿಕ್ಕೋಡಿ ನಗರದ ಖಾಸಗಿ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಶಾಂಕ, ಕಾಲೇಜಿನ ಸಮೀಪ ಇರುವ ಪಿಜಿಯಲ್ಲಿ ವಾಸವಾಗಿದ್ದ.ಮಂಗಳವಾರ ಪಿಜಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
The post ಪಿಜಿಯಲ್ಲಿ ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!! first appeared on Karnataka Public Voice.
[ad_2]
Source link