[ad_1]

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್(Ambedkar Row) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ರಾಜ್ಯಸಭೆಯಲ್ಲಿ(Rajyasabha) ನೀಡಿದ ಹೇಳಿಕೆಯು ಪ್ರತಿಪಕ್ಷಗಳ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಸಂಸತ್ನಲ್ಲಿ ಹೈಡ್ರಾಮಾವೇ ನಡೆದಿದೆ. ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಂಸದರಾದ ಪ್ರತಾಪ್ ಸಾರಂಗಿ (Pratap Sarangi) ಮತ್ತು ಮುಖೇಶ್ ರಜಪೂತ್ (Mukesh Rajaput) ಅವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆರೋಗ್ಯವನ್ನು ವಿಚಾರಿಸಿದರು.
ಇಂದು ಮುಂಜಾನೆ, ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ನಂತರ ಸಂಸತ್ತಿನಲ್ಲಿ ಹೈ ಡ್ರಾಮಾ ನಡೆಯಿತು. ಮಾಜಿ ಸಚಿವ ಪ್ರತಾಪ್ ಸಾರಂಗಿ ಅವರ ಹಣೆಯ ಎಡಭಾಗಕ್ಕೆ ಗಾಯವಾಗಿದ್ದು, ರಾಹುಲ್ ಗಾಂಧಿ ಮತ್ತೊಬ್ಬ ಸಂಸದರನ್ನು ತಮ್ಮತ್ತ ತಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಗಲಾಟೆಯಲ್ಲಿ ಬಿಜೆಪಿ ಸಂಸದ ಮುಖೇಶ್ ರಜಪೂತ್ ಕೂಡ ಗಾಯಗೊಂಡಿದ್ದಾರೆ. ಬಿಜೆಪಿ ಸಂಸದರನ್ನು ಆಂಬ್ಯುಲೆನ್ಸ್ನಲ್ಲಿ ಚಿಕಿತ್ಸೆಗಾಗಿ ರವಾನಿಸಿ ಇಬ್ಬರೂ ಸಂಸದರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Delhi: PM @narendramodi ji talked to BJP MP Mukesh Rajput to inquire about his health after he was injured in Parliament. pic.twitter.com/0b6aBMwDXH
— Oxomiya Jiyori 🇮🇳 (@SouleFacts) December 19, 2024
ಈ ಬಗ್ಗೆ ಮಾತನಾಡಿದ ಅವರು ನನ್ನ ಮೇಲೆ ಬಿದ್ದ ಸಂಸದರನ್ನು ರಾಹುಲ್ ಗಾಂಧಿ ತಳ್ಳಿದರು, ನಂತರ ನಾನು ಕೆಳಗೆ ಬಿದ್ದೆ ಎಂದು ಅವರು ಹೇಳಿದ್ದಾರೆ. ಇಬ್ಬರು ನಾಯಕರ ತಲೆಗೆ ಗಾಯವಾಗಿದ್ದು, ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಅಜಯ್ ಶುಕ್ಲಾ ತಿಳಿಸಿದ್ದಾರೆ. ಪರೀಕ್ಷೆಗಳನ್ನು ಮಾಡಲಾಗುವುದು. ಈಗಾಗಲೇ ಚಿಕಿತ್ಸೆ ಪ್ರಾರಂಭವಾಗಿದೆ. ಇಬ್ಬರಿಗೂ ತಲೆಗೆ ಪೆಟ್ಟಾದ ಕಾರಣ ಅವರನ್ನು ICU ಗೆ ದಾಖಲಿಸಲಾಗಿದೆ. ಪ್ರತಾಪ್ ಸಾರಂಗಿ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿತ್ತು ಮತ್ತು ಅವರಿಗೆ ಆಳವಾದ ಗಾಯವಾಗಿತ್ತು. ಆದ್ದರಿಂದ, ಅವರಿಗೆ ಹೊಲಿಗೆ ಹಾಕಲಾಯಿತು ಎಂದು ಅವರು ಹೇಳಿದ್ದಾರೆ.
ಮತ್ತೋರ್ವ ಸಂಸದರ ಆರೋಗ್ಯದ ಕುರಿತು ಮಾತನಾಡಿದ ಅವರು, ಮುಖೇಶ್ ರಜಪೂತ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದೀಗ ಅವರಿಗೆ ಪ್ರಜ್ಞೆ ಮರಳಿ ಬಂದಿದೆ. ಆದರೂ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು. ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್ನ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದಾಗ, ಪ್ರವೇಶದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಸಂಸದರು ನನ್ನನ್ನು ತಳ್ಳಿ ಬೆದರಿಕೆ ಹಾಕಿದರು ಎಂದು ಸಮರ್ಥಿಸಿಕೊಂಡರು. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನೂ ತಳ್ಳಲಾಯಿತು ಎಂದು ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ : Rahul Gandhi : ಲೋಕಸಭೆಯಲ್ಲಿ ಸಾವರ್ಕರ್ ವಿಷಯ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ!
[ad_2]
Source link